ಬೆಂಗಳೂರು ನಗರ ಪೊಲೀಸ್ ಮತ್ತು ಪರಿಹಾರ ತಂಡವು ಪೊಲೀಸ್ ಆಯುಕ್ತರ ಕಚೇರಿ ಪ್ರಾಂಗಣದಲ್ಲಿ “ಮಕ್ಕಳ ಜಾತ್ರೆ” ಕಾರ್ಯಕ್ರಮ ಆಯೋಜಿಸಿತ್ತು. ಪ್ರಸಿದ್ಧ ನಟ ರಾಕಿಂಗ್ ಸ್ಟಾರ್ ಯಶ್ ಅವರು ಟೇಪ್ ಕತ್ತರಿಸುವ ಮುಖಾಂತರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀ ಭಾಸ್ಕರರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಚಂದ್ರಿಕಾರಾವ್, ಎಂ.ಬಿ.ಬಿ.ಎಸ್., ಎಂ.ಡಿ. ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.